Gram Panchayat Recruitment 2022
Gram Panchayat Recruitment 2022 : ಕೋಲಾರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Gram Panchayat
ಹುದ್ದೆಯ ಹೆಸರು: ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್
ಹುದ್ದೆಗಳ ಸಂಖ್ಯೆ: 46
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.08.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.09.2022
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಗಳ ವಿವರ ಮತ್ತು ಹುದ್ದೆಗಳ ಸಂಖ್ಯೆ
ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ -04
ಡಾಟಾ ಎಂಟ್ರಿ ಆಪರೇಟರ್ -12
ಅಟೆಂಡೆಂಟ್ -30
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ
ಶೈಕ್ಷಣಿಕ ಅರ್ಹತೆ:
ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡೆಂಟ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ಅರ್ಹತೆಗಳು:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
OBC ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
SC/ST ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ಪ್ರಕ್ರಿಯೆ : ಕರವಸೂಲಿಗಾರ, ಅಟೆಂಡೆಂಟ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಬಗೆ: ಈ ಕೆಳಗೆ ಕೊಟ್ಟಿರುವ ಫಾರ್ಮ್ ನ್ನು download ಮಾಡಿ, ಅಗತ್ಯ ಇರುವ ಎಲ್ಲಾ ದಾಖಲೆಗಳನ್ನು ತುಂಬಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಹುದ್ದೆ ಖಾಲಿ ಇರುವ ಆಯಾ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಛೇರಿಯ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
Gram Panchayat Recruitment 2022
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್: https://drive.google.com/file/d/1IoyfLQ4KB-UWxqzMxR8WAH4TnZdM8wBm/view?usp=drivesdk
Best job