ಗ್ರಾಮ ಪಂಚಾಯತ್ ನಲ್ಲಿ ನೇರ ನೇಮಕಾತಿ: Gram Panchayat Recruitment 2022

Spread the love

Join Our Telegram Channel

Gram Panchayat Recruitment 2022

Gram Panchayat Recruitment 2022: ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Gram Panchayat Recruitment 2022: ಉದ್ಯೋಗ ವಿವರ

ಇಲಾಖೆ ಹೆಸರು: Bagalkot Zilla Panchayat
ಹುದ್ದೆಯ ಹೆಸರು: ಕರವಸೂಲಿಗಾರ (ಬಿಲ್ ಕಲೆಕ್ಟರ್), ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ (ಜವಾನ)

ಹುದ್ದೆಗಳ ಸಂಖ್ಯೆ: 54

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.12.2022

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: SSLC/PUC
ಕರವಸೂಲಿಗಾರ (ಬಿಲ್ ಕಲೆಕ್ಟರ್) – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡರ್ (ಜವಾನ) – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಅರ್ಹತೆಗಳು: ಕನಿಷ್ಠ 18
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ


ಅರ್ಜಿ ಶುಲ್ಕ :
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 500/-
• ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – 300/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 200/-
• ವಿಶೇಷ ಚೇತನ ಅಭ್ಯರ್ಥಿಗಳಿಗೆ – 100/-

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಯು ಈ ಕೆಳಗಡೆ ನೀಡಲಾದ ಎಸ್.ಬಿ.ಐ ಬ್ಯಾಂಕಿನ ಖಾತೆಯಲ್ಲಿ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ, ವಿವರಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ ಶುಲ್ಕ ಪಾವತಿ ಚಲನ್ ಪ್ರತಿಯನ್ನು ಅಪ್ಲೋಡ್ ಮಾಡಬೇಕು.

ಖಾತೆದಾರರ ಹೆಸರು: Chief Executive Officer, Zilla Panchayat Bagalkote
ಬ್ಯಾಂಕ್ ಹೆಸರು: State Bank Of India
ಬ್ಯಾಂಕ್ ಶಾಖೆಯ ಹೆಸರು: Bagalkote
ಖಾತೆ ನಂಬರ: 11029261255
IFSC CODE NO: SBIN0000812


ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

Gram Panchayat Recruitment 2022_Important Links

ವೆಬ್ ಸೈಟ್: https://bagalkot.nic.in/

ಅಧಿಸೂಚನೆ: https://cdn.s3waas.gov.in/s3a1d33d0dfec820b41b54430b50e96b5c/uploads/2022/11/2022111541.pdf

ಅರ್ಜಿ ಲಿಂಕ್: https://bagalkot.nic.in/en/gprecruitment/

ಇತರೆ ಮಾಹಿತಿ : ಹುದ್ದೆಗಳು ಯಾವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದೆಯೋ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು.


Spread the love

Leave a Comment