ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ: Zilla Panchayat Recruitment 2022

Spread the love

Join Our Telegram Channel

Zilla Panchayat Recruitment 2022

Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


Zilla Panchayat Recruitment 2022: ಉದ್ಯೋಗ ವಿವರ

ಇಲಾಖೆ ಹೆಸರು: Mysore Zilla Panchayat

ಹುದ್ದೆಯ ಹೆಸರು ಮತ್ತು ಶೈಕ್ಷಣಿಕ ಅರ್ಹತೆ:
1) ತಾಂತ್ರಿಕ ಸಹಾಯಕ ಅಭಿಯಂತರರು – 04 ಹುದ್ದೆ
ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

2) ತಾಂತ್ರಿಕ ಸಂಯೋಜಕರು – 02 ಹುದ್ದೆ
ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

3) ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

4) ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) – 04 ಹುದ್ದೆ
ಬಿ.ಎಸ್ಸಿ (ಕೃಷಿ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

5) ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) – 10 ಹುದ್ದೆ
ಬಿ.ಎಸ್ಸಿ (ತೋಟಗಾರಿಕೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

6) ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) – 06 ಹುದ್ದೆ
ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

7) ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ) – 01 ಹುದ್ದೆ
ಬಿ.ಎಸ್ಸಿ (ರೇಷ್ಮೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

8) ಆಡಳಿತ ಸಹಾಯಕರು – 08 ಹುದ್ದೆ
ಬಿ.ಕಾಂ ಪದವೀಧರರಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. MS Word, Excel, PowerPoint ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ: 36

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.12.2022

ವೇತನ :
ತಾಂತ್ರಿಕ ಸಹಾಯಕ ಅಭಿಯಂತರರು – 24,000/-
ತಾಂತ್ರಿಕ ಸಂಯೋಜಕರು – 29,000/-
ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು – 24,000/-
ತಾಂತ್ರಿಕ ಸಹಾಯಕರು (ಕೃಷಿ) – 24,000/-
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 24,000/-
ತಾಂತ್ರಿಕ ಸಹಾಯಕರು (ಅರಣ್ಯ) – 24,000/-
ತಾಂತ್ರಿಕ ಸಹಾಯಕರು (ರೇಷ್ಮೆ) – 24,000/-
ಆಡಳಿತ ಸಹಾಯಕರು – 17,600/-

ವಯೋಮಿತಿ ಅರ್ಹತೆಗಳು: ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Zilla Panchayat Recruitment 2022_Important Links

ವೆಬ್ ಸೈಟ್: https://mysore.nic.in/en/

ಅಧಿಸೂಚನೆ: https://cdn.s3waas.gov.in/s30d3180d672e08b4c5312dcdafdf6ef36/uploads/2022/12/2022121477.pdf

ಅರ್ಜಿ ಲಿಂಕ್: https://mysore.nic.in/en/notice/notification-to-fill-up-the-vacant-post-on-outsourcing-basis-under-mahatma-gandhi-national-rural-employment-guarantee-scheme/


Spread the love

Leave a Comment