ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ: Bharat Cooperative Bank Recruitment 2023

Spread the love

Join Our Telegram Channel

Bharat Cooperative Bank Recruitment 2023

Bharat Cooperative Bank Recruitment 2023: ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಜಯನಗರ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Bharat Cooperative Bank Recruitment 2023: ಉದ್ಯೋಗ ವಿವರ

ಇಲಾಖೆ ಹೆಸರು: Bharat Cooperative Bank

ಹುದ್ದೆಯ ಹೆಸರು: ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಮ್ಯಾನೇಜರ್, ವ್ಯವಸ್ಥಾಪಕರು, ಅಕೌಂಟೆಂಟ್, ಅಸಿಸ್ಟೆಂಟ್ ಅಕೌಂಟೆಂಟ್, ದ್ವಿತೀಯ ದರ್ಜೆ ಸಹಾಯಕರು, ಅಟೆಂಡರ್

ಒಟ್ಟು ಹುದ್ದೆಗಳ ಸಂಖ್ಯೆ: 22

ವೇತನ:
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (1 ಹುದ್ದೆ) : 40050-56550/-
ಹಿರಿಯ ವ್ಯವಸ್ಥಾಪಕರು (1 ಹುದ್ದೆ) : 36300-53850/-
ಕಂಪ್ಯೂಟರ್ ಮ್ಯಾನೇಜರ್ (1 ಹುದ್ದೆ) : 28100-50100/-
ವ್ಯವಸ್ಥಾಪಕರು (3 ಹುದ್ದೆ) : 28100-50100/-
ಅಕೌಂಟೆಂಟ್ (2 ಹುದ್ದೆ) : 24000-45300/-
ಅಸಿಸ್ಟೆಂಟ್ ಅಕೌಂಟೆಂಟ್ (2 ಹುದ್ದೆ) : 21600-40050/-
ದ್ವಿತೀಯ ದರ್ಜೆ ಸಹಾಯಕರು (2 ಹುದ್ದೆ) : 17650-32000/-
ಅಟೆಂಡರ್ (10 ಹುದ್ದೆ) :12500-24000/-

ಅರ್ಜಿ ಸಲ್ಲಿಸುವ ಬಗೆ: offline

ವಿದ್ಯಾರ್ಹತೆ: 10th/12th/Degree
1. ಮುಖ್ಯ ಕಾರ್ಯನಿರ್ವಹಣಾಧಿಕಾರಿ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಶ್ರೇಣಿಯಲ್ಲಿ ಕನಿಷ್ಠ 8 ವರ್ಷಗಳ ಸೇವಾ ಅನುಭವ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಹೊಂದಿರಬೇಕು.

• ಹಿರಿಯ ವ್ಯವಸ್ಥಾಪಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಶ್ರೇಣಿಯಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಹೊಂದಿರಬೇಕು.

• ಕಂಪ್ಯೂಟರ್ ಮ್ಯಾನೇಜರ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಗಣಕ ವಿಜ್ಞಾನದಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಮತ್ತು ಬ್ಯಾಂಕಿಂಗ್ ವಲಯದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದಲ್ಲಿ 5 ವರ್ಷಗಳು ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

• ವ್ಯವಸ್ಥಾಪಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಇರಬೇಕು.

• ಅಕೌಂಟೆಂಟ್, ಅಸಿಸ್ಟೆಂಟ್ ಅಕೌಂಟೆಂಟ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ/ಸಹಕಾರ/ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಪಡೆದಿರಬೇಕು ಹಾಗೂ ಟ್ಯಾಲಿ ಕೋರ್ಸ್ ತೇರ್ಗಡೆಯಾದ ಪ್ರಮಾಣ ಪತ್ರದ ಜೊತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

• ದ್ವಿತೀಯ ದರ್ಜೆ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕಂಪ್ಯೂಟರಿನಲ್ಲಿ ಸೂಕ್ತ ಅರಿವಿರಬೇಕು.

• ಅಟೆಂಡರ್ – ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಅರ್ಜಿ ಶುಲ್ಕ : GEN/OBC : 1,000/-
SC/ST ವರ್ಗ – 01 ಅಭ್ಯರ್ಥಿಗಳು – 500/-

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ಇವರ ಹೆಸರಿಗೆ ಡಿಡಿ/ಪೇ ಆರ್ಡರ್/ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು

ವಯೋಮಿತಿ ಅರ್ಹತೆಗಳು: ಕನಿಷ್ಠ 18 ವರ್ಷ

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ : ಅಟೆಂಡರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅವರು ಪಡೆದ ಅಂಕದ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು ಮತ್ತು ಉಳಿದ ಹುದ್ದೆಗೆ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಬ್ಯಾಂಕಿನ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ)..
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ., ನಂ. 30, 15ನೇ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು – 560 011

Bharat Cooperative Bank Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.01.2023

Bharat Cooperative Bank Recruitment 2023_Important Links

ವೆಬ್ ಸೈಟ್: https://www.bcbbank.co/

ಅಧಿಸೂಚನೆ: https://www.bcbbank.co/static-v1.1.1/files/RECUIITMENT%20BY%20THE%20BANK%20FOR%20VARIOUS%20POSTS.pdf

ಅರ್ಜಿ ಫಾರಂ: https://www.bcbbank.co/static-v1.1.1/files/APPLICATION%20FOR%20RECRUITMENT%20AND%20OTHER%20FORMS%20FOR%20SUBMISSION.pdf

ಸೂಚನೆ : ದಿನಾಂಕ 25/05/2022ರ ನೇಮಕಾತಿ ಪ್ರಕಟಣೆಯನುಸಾರ ವಿವಿಧ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.


Spread the love

Leave a Comment