ಜಿಲ್ಲಾ ನ್ಯಾಯಾಲಯ ನೇಮಕಾತಿ: District Court Recruitment 2023

Spread the love

Join Telegram Channel for Daily Updates

District Court Recruitment 2023

District Court Recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

District Court Recruitment 2023_ಉದ್ಯೋಗ ವಿವರ

ಇಲಾಖೆ ಹೆಸರು: District Court Belagavi

ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಆದೇಶ ಜಾರಿಕಾರರು, ಸಿಪಾಯಿ

ಒಟ್ಟು ಹುದ್ದೆಗಳ ಸಂಖ್ಯೆ: 68
ಶೀಘ್ರಲಿಪಿಗಾರರು ಗ್ರೇಡ್ 3 : 18 ಹುದ್ದೆಗಳು
ಆದೇಶ ಜಾರಿಕಾರರು : 6
ಸಿಪಾಯಿ : 44

ಅರ್ಜಿ ಸಲ್ಲಿಸುವ ಬಗೆ : online

ವೇತನ:
ಶೀಘ್ರಲಿಪಿಗಾರರು ಗ್ರೇಡ್3 : 27650-52650/-
ಆದೇಶ ಜಾರಿಕಾರರು : 19950-37900/-
ಸಿಪಾಯಿ : 17000-28950/-

ವಿದ್ಯಾರ್ಹತೆ : 10th/12th ಪಾಸ್,
ಶೀಘ್ರಲಿಪಿಗಾರರು – 1) ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2) ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರರು – ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಸಿಪಾಯಿ – ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ

ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಶೀಘ್ರಲಿಪಿಗಾರ ಹುದ್ದೆಗೆ ರೂ. 300, ಆದೇಶ ಜಾರಿಕಾರ ಹುದ್ದೆಗೆ ರೂ. 250, ಸಿಪಾಯಿ ಹುದ್ದೆಗೆ ರೂ. 200

ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೆ ಅರ್ಜಿ ಶುಲ್ಕವಿಲ್ಲ

ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಶೀಘ್ರಲಿಪಿಗಾರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಆದೇಶ ಜಾರಿಕಾರ, ಸಿಪಾಯಿ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ


District Court Recruitment 2023_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02.02.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.03.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 07.03.2023

District Court Recruitment 2023_ Important Links

ವೆಬ್ ಸೈಟ್: https://districts.ecourts.gov.in/belagavi

ಅಧಿಸೂಚನೆ: https://districts.ecourts.gov.in/sites/default/files/Notification_1_2023_1.pdf

ಅರ್ಜಿ ಲಿಂಕ್ : https://districts.ecourts.gov.in/belagavi-online-recruitment


Spread the love

Leave a Comment