SSC CHSL Recruitment 2023
SSC CHSL Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
SSC CHSL Recruitment 2023
ಉದ್ಯೋಗ ವಿವರ
ಇಲಾಖೆ ಹೆಸರು: SSC
ಹುದ್ದೆಯ ಹೆಸರು: ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)
ವೇತನ :
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) – 19,900-63,200/-
ಡಾಟಾ ಎಂಟ್ರಿ ಆಪರೇಟರ್ (DEO) – 25,500-81,100/-
ಒಟ್ಟು ಹುದ್ದೆಗಳ ಸಂಖ್ಯೆ : 1600
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ: 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ ಅರ್ಹತೆಗಳು: 18 ರಿಂದ 27 ವರ್ಷ
ವಯೋಮಿತಿ ಸಡಲಿಕೆ:
SC/ ST : 5 ವರ್ಷ
OBC : 3 ವರ್ಷ
Pwd ಅಭ್ಯರ್ಥಿಗಳಿಗೆ : 10 ವರ್ಷ
ಅರ್ಜಿ ಶುಲ್ಕ : 100/-
SC/ST, ಅಂಗವಿಕಲ , ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ: ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
SSC CHSL Recruitment 2023_Important dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 9.05.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8.06.2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10.06.2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 12.06.2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಆಗಸ್ಟ್, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಶೀಘ್ರದಲ್ಲೇ ತಿಳಿಸಲಾಗುವುದು
SSC CHSL Recruitment 2023_Important Links
ವೆಬ್ ಸೈಟ್: https://ssc.nic.in/
ಅಧಿಸೂಚನೆ: https://ssc.nic.in/SSCFileServer/PortalManagement/UploadedFiles/Notice_chsl_09052023.pdf
ಅರ್ಜಿ ಲಿಂಕ್: https://ssc.nic.in/