South Central Railway Recruitment 2023
South Central Railway Recruitment 2023: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯ ಇರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ
South East Central Railway Recruitment 2023: ಉದ್ಯೋಗ ವಿವರ
ಇಲಾಖೆ ಹೆಸರು: South East Central Railway
ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು
ಹುದ್ದೆಗಳ ಸಂಖ್ಯೆ: 772
ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ಕಾರ್ಪೆಂಟರ್, ವೆಲ್ಡರ್, ಇಲೆಕ್ಟ್ರಿಷಿಯನ್, ಸ್ಟೇನೋಗ್ರಾಫರ್ (ಇಂಗ್ಲೀಷ್), ಸ್ಟೇನೋಗ್ರಾಫರ್ (ಹಿಂದಿ), ಪ್ಲಂಬರ್, ಪೇಂಟರ್, ವಯರ್ ಮ್ಯಾನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಡಿಸೇಲ್ ಮೆಕ್ಯಾನಿಕ್, ಮಶಿನಿಸ್ಟ್, ಡೆಂಟಲ್ ಲೆಬೋರೆಟರಿ ಟೆಕ್ನಿಷಿಯನ್, ಗ್ಯಾಸ್ ಕಟ್ಟರ್, ಕೇಬಲ್ ಜೊಯಿಂಟರ್ ಟ್ರೇಡ್ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ
ಅರ್ಜಿ ಸಲ್ಲಿಸುವ ಬಗೆ: Online
ವಿದ್ಯಾರ್ಹತೆ: 10th(50%) & ITI
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
ದಿನಾಂಕ 06 ಜೂನ್ 2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
South East Central Railway Recruitment 2023_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08.06.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.07.2023
South East Central Railway Recruitment 2023_Important Links
ಆಫೀಸಿಯಲ್ ವೆಬ್ ಸೈಟ್: https://www.apprenticeshipindia.gov.in/
ಅಧಿಸೂಚನೆ: https://drive.google.com/file/d/1UK-Wi9PbT2oo1c4RaX89fZ7DHiO3aiUu/view?usp=drivesdk
ಅರ್ಜಿ ಲಿಂಕ್: https://www.apprenticeshipindia.gov.in/