ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ: District court Recruitment 2024

Spread the love

District Court Recruitment 2024 : ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Court Recruitment 2024 : ಉದ್ಯೋಗ ವಿವರ

ಇಲಾಖೆ ಹೆಸರು: District Court Uttar kannada

ಹುದ್ದೆಯ ಹೆಸರು: ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ

ಒಟ್ಟು ಹುದ್ದೆಗಳ ಸಂಖ್ಯೆ: 26

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ :

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರ್ಯಾಕ್ಟೀಸನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರ್ಯಾಕ್ಟೀಸನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಿರಿಯಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.


ಆದೇಶ ಜಾರಿಕಾರರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಭಾರಿ/ ಹಗುರ ವಾಹನ ಚಾಲನಾ ಅನುಜ್ಞಾ ಪತ್ರ (driving license- HMV/LMV) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು – 300/-
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – 150 /-

ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – 100/-

ಆಯ್ಕೆ ವಿಧಾನ : ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳು ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆದೇಶ ಜಾರಿಕಾರರು ಹುದ್ದೆಗೆ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.

District Court Recruitment 2024_ Important Dates


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20.06.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.07.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20.07.2024

District Court Recruitment 2024_ Important Links

ಅಫಿಸಿಯಲ್ ವೆಬ್ ಸೈಟ್: https://uttarakannada.dcourts.gov.in/

ಅಧಿಸೂಚನೆ (Typist): https://cdnbbsr.s3waas.gov.in/s3ec01e5522f7ac7cd76f19b396595c9c2/uploads/2023/11/2024061867.pdf

ಅಧಿಸೂಚನೆ (Typist- Copyst): https://cdnbbsr.s3waas.gov.in/s3ec01e5522f7ac7cd76f19b396595c9c2/uploads/2024/06/2024061816.pdf

ಅರ್ಜಿ ಲಿಂಕ್ : https://uttarakannada.dcourts.gov.in/online-recruitment/

Join Telegram Channel: https://t.me/jobsearchv183


Spread the love

Leave a Comment