ಭಾರತೀಯ ರೈಲ್ವೆಯಲ್ಲಿ ಪದವಿಪೂರ್ವ ಹುದ್ದೆಗಳ ಬೃಹತ್ ನೇಮಕಾತಿ RRB NTPC Undergraduate Recruitment 2024

Spread the love

RRB NTPC Undergraduate Recruitment 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB NTPC Undergraduate Recruitment 2024 : ಉದ್ಯೋಗ ವಿವರ

ಹುದ್ದೆ : ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ : 3445

ಶೈಕ್ಷಣಿಕ ಅರ್ಹತೆ : ಸರಾಸರಿ ಶೇಕಡಾ 50% ಅಂಕಗಳಿಗಿಂತ ಕಡಿಮೆ ಇಲ್ಲದಂತೆ 12ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಕಂಪ್ಯೂಟರ್ ನಲ್ಲಿ ಇಂಗ್ಲಿಷ್/ ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು).

ವಯೋಮಾನ :  18 ರಿಂದ 33 ವರ್ಷ ಪೂರೈಸಿರಬೇಕು

ವಯೋಮಿತಿ ಸಡಿಲಿಕೆ :
SC, STಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್ 1 & ಸ್ಟೇಜ್ 2), ಟೈಪಿಂಗ್ ಪರೀಕ್ಷೆ (ಟೈಪಿಸ್ಟ್ ಹುದ್ದೆಗಳಿಗೆ), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
SC, ST, ಮಾಜಿ ಸೈನಿಕ, PWD, Woman, ಮಂಗಳಮುಖಿ, ಅಲ್ಪಸಂಖ್ಯಾತ, OBC ಅಭ್ಯರ್ಥಿಗಳಿಗೆ – ರೂ. 250
ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ :ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

RRB NTPC Undergraduate Recruitment 2024 : Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 21.09. 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 20.10. 2024

RRB NTPC Undergraduate Recruitment 2024 : Important Links

ಅಫಿಸಿಯಲ್ ವೆಬ್ ಸೈಟ್: https://www.rrbapply.gov.in/#/auth/landing

ಅಧಿಸೂಚನೆ: https://www.rrbapply.gov.in/assets/forms/CEN_06-2024_NTPC_UnderGraduate_a11y.pdf

ಅರ್ಜಿ ಲಿಂಕ್: https://www.rrbapply.gov.in/#/auth/landing

Join WhatsApp: https://chat.whatsapp.com/KMQb2qVFveI02DLiIAi8YJ


Spread the love

Leave a Comment