South Central Railway Recruitment 2026:
South Central Railway Recruitment 2026: ಸೌತ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
South Central Railway Recruitment 2026_ಉದ್ಯೋಗ ವಿವರ
ಇಲಾಖೆ ಹೆಸರು: South Central Railway
ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ: 2801
ಅರ್ಜಿ ಸಲ್ಲಿಸುವ ಬಗೆ: Online
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಾನ : ದಿನಾಂಕ 11 ಏಪ್ರಿಲ್ 2026ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• SC, ST ಅಭ್ಯರ್ಥಿಗಳಿಗೆ – 05 ವರ್ಷ
• OBC ಅಭ್ಯರ್ಥಿಗಳಿಗೆ – 03 ವರ್ಷ
• PWD ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇತರೆ ಮಾಹಿತಿ : ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಎಸಿ ಮೆಕ್ಯಾನಿಕ್, ಏರ್ ಕಂಡೀಷನಿಂಗ್, ಕಾರ್ಪೆಂಟರ್, ಡಿಸೇಲ್ ಮೆಕ್ಯಾನಿಕ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇಂಡಸ್ಟ್ರಿಯಲ್ ಇಲೆಕ್ಟ್ರಾನಿಕ್ಸ್, ಇಲೆಕ್ಟ್ರಿಷಿಯನ್, ಇಲೆಕ್ಟ್ರಿಕಲ್ (ಎಸ್&ಟಿ) (ಇಲೆಕ್ಟ್ರಿಷಿಯನ್), ಪವರ್ ಮೆಂಟೆನನ್ಸ್, ಟ್ರೇನ್ ಲೈಟಿಂಗ್ (ಇಲೆಕ್ಟ್ರಿಷಿಯನ್), ಫಿಟ್ಟರ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ಮಶಿನಿಸ್ಟ್, ಮೆಕ್ಯಾನಿಕ್ ಮೋಟಾರ್ ಟೂಲ್ ಮೆಂಟೆನನ್ಸ್, ಪೇಂಟರ್, ವೆಲ್ಡರ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ
ಅರ್ಜಿ ಶುಲ್ಕ : For GEN/OBC/ – 100/-
For SC/ST/Woman Candidates – Nil
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
South Central Railway Recruitment 2025_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13.04.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11.04.2025
South Central Railway Recruitment 2025_Important Links
Website: