ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ : KSP Civil Police Constable Recruitment 2026

Spread the love

KSP Civil Police Constable Recruitment 2026
KSP Civil Police Constable Recruitment 2026:ಕರ್ನಾಟಕ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


KSP Civil Police Constable Recruitment 2026_ ಉದ್ಯೋಗ ವಿವರ :

ಇಲಾಖೆ ಹೆಸರು: ಕರ್ನಾಟಕ ಪೊಲೀಸ್ ಇಲಾಖೆ (KSP)

ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳಾ)

ಹುದ್ದೆಗಳ ಸಂಖ್ಯೆ: 3991


ಅರ್ಜಿ ಸಲ್ಲಿಸುವ ಬಗೆ : online

KSP Recruitment Salary: 37500-67650/-

ವಿದ್ಯಾರ್ಹತೆ : PUC

ವಯೋಮಿತಿ ಅರ್ಹತೆಗಳು:
ಕನಿಷ್ಟ – 19 ವರ್ಷ

ಗರಿಷ್ಟ ವಯಸ್ಸು SC/ST/OBC – 29ವರ್ಷ
ಗರಿಷ್ಟ ವಯಸ್ಸು GEN- 27 ವರ್ಷ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಶುಲ್ಕ :
GEN/2A/2B3A/3B – 750/-
SC/ST/– 500/-

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


KSP Civil Police Constable Recruitment 2026_Important Dates :

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08.06.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.07.2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 04.07.2026

KSP Civil Police Constable Recruitment 2026_Important Link :

ಆಫೀಸಿಯಲ್ ವೆಬ್ ಸೈಟ್ : https://cetonline.karnataka.gov.in/kea/


ಅಧಿಸೂಚನೆ (RPC) : https://cetonline.karnataka.gov.in/keawebentry456/cpcrpc2026/rpc-cpckannada.pdf

ಅಧಿಸೂಚನೆ (KK) : https://cetonline.karnataka.gov.in/keawebentry456/cpckk2026/kk-cpckannada.pdf

ಅರ್ಜಿ ಲಿಂಕ್ (ಜೂನ್ 08 ರಿಂದ ):


Spread the love

Leave a Comment