ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: Vijayapura District Court Recruitment 2022

Spread the love

Vijayapura District Court Recruitment 2022: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: Vijayapura District Court

ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಹುದ್ದೆಗಳ ಸಂಖ್ಯೆ: 28
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.07.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26.07.2022

ವೇತನ : ಬೆರಳಚ್ಚು ನಕಲುಗಾರ : 21400-42000 

ಆದೇಶ ಜಾರಿಕಾರ : 19950-37900 

ಜವಾನ : 17000-28950                                                                                  

ಶೈಕ್ಷಣಿಕ ಅರ್ಹತೆ: ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆದೇಶ ಜಾರಿಕಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು/ಭಾರಿ ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ – ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100                                                                              ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

Notification(Typist Copyist) : http://districts.ecourts.gov.in/sites/default/files/NTF_TCP-3-2022.pdf

Notification(Process Server) : http://districts.ecourts.gov.in/sites/default/files/NTF_PS-2-2022.pdf

Notification(Peon) : http://districts.ecourts.gov.in/sites/default/files/NTF_PN-1-2022.pdf

ಅರ್ಜಿ ಲಿಂಕ್ : https://districts.ecourts.gov.in/vijayapura-onlinerecruitment


Spread the love

Leave a Comment