Join Our Telegram Channel
AHVS Karnataka Recruitment 2022
AHVS Karnataka Recruitment 2022: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
AHVS Karnataka Recruitment 2022 ಉದ್ಯೋಗ ವಿವರ
ಇಲಾಖೆ ಹೆಸರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
ಹುದ್ದೆಯ ಹೆಸರು: ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು)
ಹುದ್ದೆಗಳ ಸಂಖ್ಯೆ: 250
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.11.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06.11.2022
ವೇತನ : 21,400 – 42,000/-
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶು ಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆ.ಒ.ಸಿ ಇನ್ ಡೈರಿ/(ಪೌಲ್ಟ್ರಿ) ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ಅರ್ಹತೆಗಳು: ಕನಿಷ್ಠ 18 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 40 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ – 750/-
ಎಸ್ಸಿ, ಎಸ್ಟಿ, ಪ್ರ 1, ವಿಶೇಷ ಚೇತನ – 500/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಡೌನ್ಲೋಡ್ ಮಾಡಿ ಇ-ಅಂಚೆ ಕಚೇರಿ ಮೂಲಕ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
AHVS Karnataka Recruitment 2022_Important Links
ವೆಬ್ ಸೈಟ್ : https://ahvs.kar.nic.in/kn-home.html
ಅರ್ಜಿ ಲಿಂಕ್ : https://cetonline.karnataka.gov.in/kea/kahvs