ಗ್ರಾಮ ಪಂಚಾಯಿತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Bangalore Rural Gram Panchayat Recruitment 2022

Spread the love

Bangalore Rural Gram Panchayat Recruitment 2022

Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ

ಹುದ್ದೆಯ ಹೆಸರು: ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ (ಜವಾನ), ಕ್ಲೀನರ್ (ಸ್ವಚ್ಛತಾಗಾರ)

ಹುದ್ದೆಗಳ ಸಂಖ್ಯೆ: 65

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.09.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.10.2022



ಶೈಕ್ಷಣಿಕ ಅರ್ಹತೆ:

ಕರವಸೂಲಿಗಾರರು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಅಟೆಂಡೆಂಟ್ ಹಾಗೂ ಕ್ಲೀನರ್ :- SSLC


ವಯೋಮಿತಿ ಅರ್ಹತೆಗಳು:
(SC/ST ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
OBC ಅಭ್ಯರ್ಥಿಗಳಿಗೆ -ಗರಿಷ್ಠ 38 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ


ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 300/-
ಹಿಂದುಳಿದ ವರ್ಗದ ಅಭ್ಯರ್ಥಿಗಳು: 200/-
ಪ‌.ಜಾತಿ, ಪ.ಪಂ. ಅಭ್ಯರ್ಥಿಗಳು :100/-



ಆಯ್ಕೆ ವಿಧಾನ : ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Bangalore Rural Gram Panchayat Recruitment_Important Links

ಅಧಿಸೂಚನೆ : https://drive.google.com/file/d/1clEhW_9uF7SP-vPj2ziqK5_Q20-iW7T7/view?usp=drivesdk

ಅರ್ಜಿ ಲಿಂಕ್ : https://sevasindhuservices.karnataka.gov.in/error.do

Join Our Telegram Channel


Spread the love

Leave a Comment