ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ: BBMP Recruitment 2023

Spread the love

Join Our Telegram Channel

BBMP Recruitment 2023

BBMP Recruitment 2023: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ


BBMP Recruitment 2023:
ಉದ್ಯೋಗ ವಿವರ

ಇಲಾಖೆ ಹೆಸರು: BBMP

ಹುದ್ದೆಯ ಹೆಸರು: ಪೌರಕಾರ್ಮಿಕರು (ಗ್ರೂಪ್ “ಡಿ”)

ಹುದ್ದೆಗಳ ಸಂಖ್ಯೆ: 3673

ಉಳಿಕೆ ಮೂಲ ವೃಂದ – 3243 ಹುದ್ದೆಗಳು
ಕಲ್ಯಾಣ-ಕರ್ನಾಟಕ ವೃಂದ – 430 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ: Offline

ವಿದ್ಯಾರ್ಹತೆ: ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಿಲ್ಲ.
1.ಕನ್ನಡ ಮಾತನಾಡಲು ಗೊತ್ತಿರಬೇಕು.
2. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 23-11-2022) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ : 17,000 – 28,950 /-

ವಯೋಮಿತಿ ಅರ್ಹತೆಗಳು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಪಾಲಿಕೆಯ ಆಯಾ ವಾರ್ಡಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

BBMP Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.01.2023

BBMP Recruitment 2023_Important Links

Official website: https://site.bbmp.gov.in/indexenglish.html

NOTIFICATION (RPC): https://drive.google.com/file/d/1-6zQAherD6Dsf56MTHZShVVrTStU_WvG/view?usp=drivesdk

NOTIFICATION (HK): https://drive.google.com/file/d/1-BHEIlNM1ZLXzqzn1q8MsY3AtGaYiv1q/view?usp=drivesdk

Application form: https://drive.google.com/file/d/1-R6TN5___yvSyLWRzrp-Us0huMZuPR9h/view?usp=drivesdk


Spread the love

Leave a Comment