ಬೆಸ್ಕಾಂ ನೇಮಕಾತಿ 2023: BESCOM Recruitment 2023

Spread the love

BESCOM Recruitment 2023

BESCOM Recruitment 2023: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

BESCOM Recruitment 2023_ಉದ್ಯೋಗ ವಿವರ

ಇಲಾಖೆ ಹೆಸರು: BESCOM

ಹುದ್ದೆಯ ಹೆಸರು: ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 400

ಪದವೀಧರ ಅಪ್ರೆಂಟಿಸ್: 325

ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – 75

ಅರ್ಜಿ ಸಲ್ಲಿಸುವ ಬಗೆ : online

ಮಾಸಿಕ ಸ್ಟೈ ಫೆಂಡ :
ಪದವೀಧರ ಅಪ್ರೆಂಟಿಸ ಹುದ್ದೆಗೆ – 9000/-
ಟೆಕ್ನಿಷಿಯನ್ ಅಪ್ರೆಂಟಿಸ ಹುದ್ದೆಗೆ – 8000/-

ಶೈಕ್ಷಣಿಕ ಅರ್ಹತೆ: diploma/BE/BTech

ವಯೋಮಿತಿ ಅರ್ಹತೆಗಳು: ಕನಿಷ್ಠ 18 ವರ್ಷ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

 ದಾಖಲೆಗಳ ಪರಿಶೀಲನೆ ವಿಳಾಸ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಹೆಚ್.ಆರ್.ಡಿ. ಸೆಂಟರ್, 1ನೇ ಮಹಡಿ, ಕ್ರೆಸೆಂಟ್ ಟವರ್ಸ್, ಕ್ರೆಸೆಂಟ್ ರಸ್ತೆ, ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್ ಕೋರ್ಸ್, ಬೆಂಗಳೂರು – 560001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

BESCOM Recruitment 2023_ Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 11.12.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.12.2023
ಕಿರುಪಟ್ಟಿಯಾದ ಅಭ್ಯರ್ಥಿಗಳ ಪಟ್ಟಿಯ ಘೋಷಣೆ : 08.01 2024
ದಾಖಲೆಗಳ ಪರಿಶೀಲನೆ ದಿನಾಂಕ : 22.01.2024 ರಿಂದ 24.01.2024

BESCOM Recruitment 2023_ Important Links

ವೆಬ್ ಸೈಟ್: https://bescom.karnataka.gov.in/english

ಅಧಿಸೂಚನೆ : https://drive.google.com/file/d/19m8xBTKmlEUMjaEs8XIE4_lK6uymjPXF/view?usp=drivesdk

ಅರ್ಜಿ ಲಿಂಕ್ : https://nats.education.gov.in/student_type.php

Bescom Recruitment How to apply

Join Telegram Channel & WhatsApp group for Daily Updates


Spread the love

Leave a Comment