CISF Constable Driver Recruitment 2025 :
CISF Constable Fire Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್/ಫೈರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
CISF Constable Driver Recruitment 2025 :ಉದ್ಯೋಗ ವಿವರ
ಹುದ್ದೆ : ಕಾನ್ಸ್‌ಟೇಬಲ್ ಡ್ರೈವರ್
ಹುದ್ದೆಗಳ ಸಂಖ್ಯೆ : 1124
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ವಿಜ್ಞಾನ ವಿಷಯದೊಂದಿಗೆ 12 ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಾನ : 21 ರಿಂದ 27
ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 5 ವರ್ಷ
OBC ಅಭ್ಯರ್ಥಿಗಳಿಗೆ – 3 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ (PET), ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ದೈಹಿಕ ಸಾಮರ್ಥ್ಯ ಪರೀಕ್ಷೆ – 5 ಕಿಲೋಮೀಟರ್ ಓಟ (24 ನಿಮಿಷ)
ದೇಹದಾರ್ಢ್ಯತೆ ಪರೀಕ್ಷೆ – ಎತ್ತರ 170 ಸೆಂ.ಮೀ., ಎದೆ ಸುತ್ತಳತೆ 80-85 ಸೆಂ.ಮೀ. (ಕನಿಷ್ಠ ವಿಸ್ತರಣೆ 5 ಸೆಂ.ಮೀ.)
ವೇತನ : ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
• ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.
CISF Constable Driver Recruitment 2025 : Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 03.02.2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 04.3.2025
CISF Constable Driver Recruitment 2025 : Important Links
ಅಫಿಸಿಯಲ್ ವೆಬ್ ಸೈಟ್: https://www.cisf.gov.in/
ಅರ್ಜಿ ಲಿಂಕ್ : https://cisfrectt.cisf.gov.in/