ಡಿಸಿಸಿ ಬ್ಯಾಂಕ್ ನೇಮಕಾತಿ 2024 – DCC Bank Recruitment 2024

Spread the love

DCC Bank Recruitment 2024

DCC Bank Recruitment 2024 : ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಂಡ್ಯ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DCC Bank Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು:DCC Bank

ಹುದ್ದೆಯ ಹೆಸರು: ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್

ಹುದ್ದೆಗಳ ಸಂಖ್ಯೆ:94

ವಿದ್ಯಾರ್ಹತೆ:

ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು – ಕಂಪ್ಯೂಟರ್ ಸೈನ್ಸ್ ನಲ್ಲಿ ಎಂ.ಟೆಕ್ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಕಿರಿಯ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ವಾಹನ ಚಾಲಕರು – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದ್ದು, ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಅಟೆಂಡರ್ – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2A, 2B, 3A, 3B ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. (ವಾಹನ ಚಾಲಕರ ಹುದ್ದೆಗೆ ಸಂದರ್ಶನಕ್ಕೆ ಮುಂಚಿತವಾಗಿ ನಾಲ್ಕು ಚಕ್ರ ಲಘು ವಾಹನ ಚಾಲನೆ ಕೌಶಲ್ಯ ಪರೀಕ್ಷೆ ನಡೆಸಲಾಗುವುದು)

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – ರೂ. 1500
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

DCC Bank Recruitment 2024: Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :18.01.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :16.02.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ :16.02.2024

DCC Bank Recruitment 2024: Important Links

ಅಫಿಸಿಯಲ್ ವೆಬ್ ಸೈಟ್: https://www.mandyadccbank.com/index.html

ಅಧಿಸೂಚನೆ : https://virtualofficeerp.com/mdccb2024n2/uploads/files/notification/10qvi8.pdf

ಅರ್ಜಿ ಲಿಂಕ್ : https://www.mandyadccbank.com/recruitment_notification.html


Spread the love

Leave a Comment