ಜಿಲ್ಲಾ ನ್ಯಾಯಾಲಯ ನೇಮಕಾತಿ: District Court Recruitment 2022

Spread the love

Join Our Telegram Channel: https://t.me/jobsearchv183

District Court Recruitment 2022 : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


ಉದ್ಯೋಗ ವಿವರ

ಇಲಾಖೆ ಹೆಸರು: District Court

ಹುದ್ದೆಯ ಹೆಸರು: ಶಿಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ

ಹುದ್ದೆಗಳ ಸಂಖ್ಯೆ: 33
ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.08.2022

ಶುಲ್ಕ ಪಾವತಿಸಲು ಕೊನೆ ದಿನಾಂಕ: 20.08.2022

District Court Recruitment Salary

ಶೀಘ್ರಲಿಪಿಗಾರರು ಗ್ರೇಡ್ :- 27650-52650/-
ಬೆರಳಚ್ಚುಗಾರರು :- 21400-42000/-
ಬೆರಳಚ್ಚು ನಕಲುಗಾರರು : -21400-42000/-
ಆದೇಶ ಜಾರಿಕಾರರು :- 19950-37900/-
ಜವಾನ :- 17000-28950/-

ವಿದ್ಯಾರ್ಹತೆ : 

ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢದರ್ಜೆ ಹಾಗೂ ಶೀಘ್ರಲಿಪಿ ಪ್ರೌಢದರ್ಜೆ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ

ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 300/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 150/-
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.


Spread the love

Leave a Comment