District Court Recruitment 2022
District Court Recruitment 2022 : ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: District Court Chikkamagaluru
ಹುದ್ದೆಯ ಹೆಸರು: ಬೆರಳಚ್ಚುಗಾರರು (7 ಹುದ್ದೆಗಳು), ಬೆರಳಚ್ಚು ನಕಲುಗಾರರು (1 ಹುದ್ದೆಗಳು) ಹಾಗೂ ಸೇವಕರು (12 ಹುದ್ದೆಗಳು)
ಹುದ್ದೆಗಳ ಸಂಖ್ಯೆ: 20
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.08.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.09.2022
ಶುಲ್ಕ ಪಾವತಿಸಲು ಕೊನೆ ದಿನಾಂಕ: 17.09.2022
District Court Recruitment Salary
ಬೆರಳಚ್ಚುಗಾರರು : 21400-42000/-
ಬೆರಳಚ್ಚು ನಕಲುಗಾರರು : 21400-42000/-
ಸೇವಕರು : 17000-28950/-
ವಿದ್ಯಾರ್ಹತೆ :
ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಕಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸೇವಕರು ಹುದ್ದೆಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 200/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 100/-
ಎಸ್ಸಿ, ಎಸ್ಟಿ, ಪ್ರವರ್ಗ 1 – 100 /-
ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ
ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:
ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸೇವಕರು ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
District Court Recruitment 2022_Important Links
ವೆಬ್ ಸೈಟ್ : https://districts.ecourts.gov.in/chikkamagaluru
ಅಧಿಸೂಚನೆ (ಬೆರಳಚ್ಚುಗಾರರು) : https://districts.ecourts.gov.in/sites/default/files/ADMn-02.pdf
ಅಧಿಸೂಚನೆ ( ಬೆರಳಚ್ಚು ನಕಲುಗಾರರು): https://districts.ecourts.gov.in/sites/default/files/ADMN-003.pdf
ಅಧಿಸೂಚನೆ (ಸೇವಕರು): https://districts.ecourts.gov.in/sites/default/files/ADMN-04.pdf
ಅರ್ಜಿ ಲಿಂಕ್ : https://districts.ecourts.gov.in/chikkamagaluru-onlinerecruitment