Join Telegram Channel for Daily Updates
District Court Recruitment 2023
District Court Recruitment 2023 : ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
District Court Recruitment 2023_ಉದ್ಯೋಗ ವಿವರ
ಇಲಾಖೆ ಹೆಸರು: District Court Dharwad
ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು ( 2ಹುದ್ದೆಗಳು), ಜವಾನ (31 ಹುದ್ದೆಗಳು)
ಒಟ್ಟು ಹುದ್ದೆಗಳ ಸಂಖ್ಯೆ: 33
ಅರ್ಜಿ ಸಲ್ಲಿಸುವ ಬಗೆ : online
ವೇತನ:
ಬೆರಳಚ್ಚು ನಕಲುಗಾರರು : 21400-42000/-
ಜವಾನ : 17000-28950/-
ವಿದ್ಯಾರ್ಹತೆ : 10th/12th ಪಾಸ್,
ಬೆರಳಚ್ಚು ನಕಲುಗಾರ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಲೈಸೆನ್ಸ್ ಐಚ್ಛಿಕ (Optional)
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/-
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – 100/-
ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:
ಬೆರಳಚ್ಚು ನಕಲುಗಾರ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
District Court Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.02.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01.03.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03.03.2023
District Court Recruitment 2023_ Important Links
ವೆಬ್ ಸೈಟ್: https://districts.ecourts.gov.in/dharwadhistory
ಅಧಿಸೂಚನೆ: https://districts.ecourts.gov.in/sites/default/files/Notification01-2023.pdf
ಅರ್ಜಿ ಲಿಂಕ್: https://districts.ecourts.gov.in/dharwad-onlinerecruitment