Join Telegram Channel for Daily Updates
District Court Recruitment 2023
District Court Recruitment 2023: ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
District Court Recruitment 2023_ಉದ್ಯೋಗ ವಿವರ
ಇಲಾಖೆ ಹೆಸರು: District Court Raichur
ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಆದೇಶ ಜಾರಿಕಾರರು, ಜವಾನ
ಒಟ್ಟು ಹುದ್ದೆಗಳ ಸಂಖ್ಯೆ: 33
ಶೀಘ್ರಲಿಪಿಗಾರರು ಗ್ರೇಡ್ 3 : 7 ಹುದ್ದೆಗಳು
ಆದೇಶ ಜಾರಿಕಾರರು : 3
ಜವಾನ : 22
ಬೆರಳಚ್ಚುಗಾರ- 1
ಅರ್ಜಿ ಸಲ್ಲಿಸುವ ಬಗೆ : online
ವೇತನ:
ಶೀಘ್ರಲಿಪಿಗಾರರು ಗ್ರೇಡ್3 : 27650-52650/-
ಆದೇಶ ಜಾರಿಕಾರರು : 19950-37900/-
ಜವಾನ : 17000-28950/-
ಬೆರಳಚ್ಚುಗಾರ- 21400-42000
ವಿದ್ಯಾರ್ಹತೆ : 10th/12th ಪಾಸ್,
ಶೀಘ್ರಲಿಪಿಗಾರರು ಗ್ರೇಡ್ 3 – 1) ಪಿ.ಯು.ಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು – 1) ಪಿ.ಯು.ಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆದೇಶ ಜಾರಿಕಾರರು – 1) ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.
3) ಲಘು ವಾಹನ ಚಾಲನಾ ಪರವಾನಗಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಜವಾನ – 1) ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/-
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – 100/-
ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:
ಶೀಘ್ರಲಿಪಿಗಾರ, ಬೆರಳಚ್ಚುಗಾರ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಉಕ್ತ ಲೇಖನವನ್ನು ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಆದೇಶ ಜಾರಿಕಾರ, ಜವಾನ – 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
District Court Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09.02.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.03.2023
District Court Recruitment 2023_ Important Links
ವೆಬ್ ಸೈಟ್: https://districts.ecourts.gov.in/raichur
ಅರ್ಜಿ ಲಿಂಕ್: https://districts.ecourts.gov.in/raichur-onlinerecruitment