ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 – District Court Recruitment 2023

Spread the love

District Court Recruitment 2023

District Court Recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

District Court Recruitment 2023_ಉದ್ಯೋಗ ವಿವರ

ಇಲಾಖೆ ಹೆಸರು: District Court Belagavi
ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3
ಒಟ್ಟು ಹುದ್ದೆಗಳ ಸಂಖ್ಯೆ:13
ಅರ್ಜಿ ಸಲ್ಲಿಸುವ ಬಗೆ : online
ವೇತನ:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.


ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳು – ರೂ. 300
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಶೀಘ್ರಲಿಪಿಗಾರ, ಶೀಘ್ರಲಿಪಿಗಾರರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಗಳ ಸರಾಸರಿ ಆಧಾರದ ಮೇಲೆ ಮೆರಿಟ್‌ವೈಸ್‌ (Merit wise) 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. 

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ


District Court Recruitment 2023_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21.07.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.08.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24.08.2023

District Court Recruitment 2023_ Important Links

ಅಫಿಸಿಯಲ್ ವೆಬ್ ಸೈಟ್: https://districts.ecourts.gov.in/belagavi

ಅಧಿಸೂಚನೆ: https://districts.ecourts.gov.in/sites/default/files/Steno_Not_2_2023.pdf

ಅರ್ಜಿ ಲಿಂಕ್: https://recruitmenthck.kar.nic.in/district/bgv/stg/home.php


Spread the love

Leave a Comment