District Court Recruitment 2024
District Court Recruitment 2024 : ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
District Court Recruitment 2024 : ಉದ್ಯೋಗ ವಿವರ
ಇಲಾಖೆ ಹೆಸರು: District Court yadagir
ಹುದ್ದೆಯ ಹೆಸರು:ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ
ಒಟ್ಟು ಹುದ್ದೆಗಳ ಸಂಖ್ಯೆ:30
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಜವಾನರು – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ -ರೂ.200
ಪ್ರವರ್ಗ 2A, 2ಬB, 3A, 3B ಅಭ್ಯರ್ಥಿಗಳು – ರೂ. 100
SC, ST, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
District Court Recruitment 2024_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.01.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.02.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 16.02.2024
District Court Recruitment 2024_ Important Links
ಅಫಿಸಿಯಲ್ ವೆಬ್ ಸೈಟ್: https://yadgir.dcourts.gov.in/
ಅಧಿಸೂಚನೆ (ಶೀಘ್ರಲಿಪಿಗಾರರು ಗ್ರೇಡ್ 3): https://cdnbbsr.s3waas.gov.in/s3ec03ca793d8b79c1b6665cf109d6077a/uploads/2024/01/2024010631.pdf
ಅಧಿಸೂಚನೆ ( ಬೆರಳಚ್ಚುಗಾರರು): https://cdnbbsr.s3waas.gov.in/s3ec03ca793d8b79c1b6665cf109d6077a/uploads/2024/01/2024010622.pdf
ಅಧಿಸೂಚನೆ ( ಜವಾನ): https://cdnbbsr.s3waas.gov.in/s3ec03ca793d8b79c1b6665cf109d6077a/uploads/2024/01/2024010613-1.pdf
ಅರ್ಜಿ ಲಿಂಕ್ : https://yadgir.dcourts.gov.in/online-recruitment/