ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 : District Court Recruitment 2024

Spread the love

District Court Recruitment 2024:ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Court Recruitment 2024 : ಉದ್ಯೋಗ ವಿವರ

ಇಲಾಖೆ ಹೆಸರು: District Court Tumkur

ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ

ಒಟ್ಟು ಹುದ್ದೆಗಳ ಸಂಖ್ಯೆ: 60

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ :

ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸೇವಕ – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.


ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ


ಅರ್ಜಿ ಶುಲ್ಕ: • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – ರೂ. 100
• SC, ST, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.

District Court Recruitment 2024_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12.03.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.04.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 11.04.2024

District Court Recruitment 2024_ Important Links

ಅಫಿಸಿಯಲ್ ವೆಬ್ ಸೈಟ್: https://tumakuru.dcourts.gov.in/

ಅಧಿಸೂಚನೆ: https://cdnbbsr.s3waas.gov.in/s3ec033083202a936b7d0ef8b680d7ae73/uploads/2024/03/2024031237.pdf

ಅರ್ಜಿ ಲಿಂಕ್ : https://tumakuru.dcourts.gov.in/notice-category/recruitments/

Join WhatsApp Group: https://chat.whatsapp.com/KMQb2qVFveI02DLiIAi8YJ

Join Telegram channel: https://t.me/jobsearchv183


Spread the love

Leave a Comment