ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ: District court Recruitment 2026

Spread the love

District Court Recruitment 2026 :

District Court Recruitment 2026 : ಯಾದಗಿರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Court Recruitment 2026 : ಉದ್ಯೋಗ ವಿವರ

ಇಲಾಖೆ ಹೆಸರು: District Court yadgiri

ಹುದ್ದೆಯ ಹೆಸರು: ಆದೇಶ ಜಾರಿಕಾರರು, ಜವಾನ

ಒಟ್ಟು ಹುದ್ದೆಗಳ ಸಂಖ್ಯೆ: 14

ಅರ್ಜಿ ಸಲ್ಲಿಸುವ ಬಗೆ : online


ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC  ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು, ಬರೆಯಲು ಬರಬೇಕು.

ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ನಿಗದಿತ ಅರ್ಜಿ ಶುಲ್ಕದ ವಿವರ :

ಸಾಮಾನ್ಯ ವರ್ಗದ ಅಭ್ಯರ್ಥಿಗಳು – 200/-
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – 100 /-

ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.

District Court Recruitment 2026_ Important Dates


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13.03.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.04.2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 13.04.2026

District Court Recruitment 2026_ Important Links

ಅಫಿಸಿಯಲ್ ವೆಬ್ ಸೈಟ್: https://yadgir.dcourts.gov.in/notice-category/recruitments/

ಅದಿಸೂಚನೆ (Peon): https://cdnbbsr.s3waas.gov.in/s3ec03ca793d8b79c1b6665cf109d6077a/uploads/2026/03/2026031215.pdf

ಅದಿಸೂಚನೆ  (Process Server): https://cdnbbsr.s3waas.gov.in/s3ec03ca793d8b79c1b6665cf109d6077a/uploads/2026/03/2026031215.pdf

ಅರ್ಜಿ ಲಿಂಕ್ Peon : https://judiciary.karnataka.gov.in/recruitment/district/ydg/gpk/home.php

ಅರ್ಜಿ ಲಿಂಕ್ (Process Server): https://judiciary.karnataka.gov.in/recruitment/district/ydg/psk/home.php


Spread the love

Leave a Comment