Join Our Telegram Channel
DRDO Recruitment 2022
DRDO Recruitment 2022 : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಅಗತ್ಯವಿರುವ ಸ್ಟೆನೋಗ್ರಾಫರ್, ಫೈರ್‌ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
DRDO Recruitment ಉದ್ಯೋಗ ವಿವರ
ಇಲಾಖೆ ಹೆಸರು: DRDO
ಹುದ್ದೆಯ ಹೆಸರು: ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸ್ಟೆನೋಗ್ರಾಫರ್ ಗ್ರೇಡ್ 1, ಸ್ಟೆನೋಗ್ರಾಫರ್ ಗ್ರೇಡ್ 2, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಸೆಕ್ಯೂರಿಟಿ ಅಸಿಸ್ಟೆಂಟ್, ವೆಹಿಕಲ್ ಆಪರೇಟರ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್.
ಒಟ್ಟು ಹುದ್ದೆಗಳು: 1061
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.12.2022
ವಿದ್ಯಾರ್ಹತೆ : 10th/12th/Degree
•ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ 1 – ಪದವಿ ಅರ್ಹತೆ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ 2 – ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ & ಸ್ಟೋರ್ ಅಸಿಸ್ಟೆಂಟ್ – ದ್ವಿತೀಯ ಪಿಯುಸಿ ಜೊತೆಗೆ ನಿಗದಿತ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಸೆಕ್ಯೂರಿಟಿ ಅಸಿಸ್ಟೆಂಟ್ – ದ್ವಿತೀಯ ಪಿಯುಸಿ ಪಾಸ್ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ವೆಹಿಕಲ್ ಆಪರೇಟರ್ – 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
• ಫೈರ್ ಇಂಜಿನ್ ಡ್ರೈವರ್ – 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
• ಫೈರ್‌ಮ್ಯಾನ್ – 10ನೇ ತರಗತಿ ಪಾಸ್
ಹುದ್ದೆಗಳ ಸಂಖ್ಯೆ ಮತ್ತು ವೇತನ :
ವಯೋಮಿತಿ ಅರ್ಹತೆಗಳು:
• ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸ್ಟೆನೋಗ್ರಾಫರ್ ಗ್ರೇಡ್ 1 – ಗರಿಷ್ಠ 30 ವರ್ಷ
• ಸ್ಟೆನೋಗ್ರಾಫರ್ ಗ್ರೇಡ್ 2, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಸೆಕ್ಯೂರಿಟಿ ಅಸಿಸ್ಟೆಂಟ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್ – ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ
• ವೆಹಿಕಲ್ ಆಪರೇಟರ್ – ಗರಿಷ್ಠ 27 ವರ್ಷ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸ್ಕಿಲ್/ ಫಿಸಿಕಲ್ ಫಿಟ್ನೆಸ್, ಸಾಮರ್ಥ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
DRDO Recruitment_Important Links
ವೆಬ್ ಸೈಟ್: https://www.drdo.gov.in/ceptm-advertisement/1920
ಅರ್ಜಿ ಲಿಂಕ್: https://ceptam10.com/cepanaoct22/reg_start.php?msg=Application_is_not_yet_started.