ಗದಗ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ನೇಮಕಾತಿ : Gadag DC Office Recruitment 2022

Spread the love

Join Our Telegram Channel

Gadag DC Office Recruitment 2022

Gadag DC Office Recruitment 2022 : ಗದಗ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

DC Office Recruitment 2022_ಉದ್ಯೋಗ ವಿವರ

ಇಲಾಖೆ ಹೆಸರು:Gadag DC Office

ಅರ್ಜಿ ಸಲ್ಲಿಸುವ ಬಗೆ : ಆಫ್ಲೈನ್

ಹುದ್ದೆಯ ಹೆಸರು: ಲೋಡರ್ ಮತ್ತು ಕ್ಲೀನರ್

ಒಟ್ಟು ಹುದ್ದೆಗಳ ಸಂಖ್ಯೆ: 58

ವೇತನ : 17,000-28,950/-

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯ ಗದಗ-ಬೆಟಗೇರಿ ನಗರಸಭೆ, ಗಜೇಂದ್ರಗಡ ಪುರಸಭೆ, ಲಕ್ಷ್ಮೇಶ್ವರ ಪುರಸಭೆ, ಮುಂಡರಗಿ ಪುರಸಭೆ, ನರಗುಂದ ಪುರಸಭೆ, ರೋಣ ಪುರಸಭೆ, ಮುಳಗುಂದ ಪಟ್ಟಣ ಪಂಚಾಯತ, ನರೇಗಲ್ಲ ಪಟ್ಟಣ ಪಂಚಾಯತ ಹಾಗೂ ಶಿರಹಟ್ಟಿ ಪಟ್ಟಣ ಪಂಚಾಯತಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.


ಕನಿಷ್ಠ ಅರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ ಅಥವಾ ಕ್ಲೀನರ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 55 ವರ್ಷ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ :
• ಪ.ಜಾತಿ, ಪ.ಪಂ, ಪ್ರವರ್ಗ 1 ಹಾಗೂ ಮಹಿಳಾ ಅಭ್ಯರ್ಥಿಗಳು – ರೂ. 100
• ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50


ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಅರ್ಜಿಯೊಂದಿಗೆ ಸಲ್ಲಿಸಬೇಕು (ಡಿಡಿ ಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಗದಗ ಇವರ ಹೆಸರಿಗೆ ತೆಗೆಯುವುದು)

ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ : 123, 1ನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಗದಗ ಅಥವಾ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ, ಗದಗ, ಕೊಠಡಿ ಸಂಖ್ಯೆ 123, 1ನೇ ಮಹಡಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.11.2022

Gadag DC Office Recruitment 2022_Important Links

ಅಧಿಸೂಚನೆ: https://drive.google.com/file/d/1nHHk7sn0OL-RXlmYR0hDXtfvKJa_4tQy/view?usp=drivesdk


Spread the love

Leave a Comment