ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 : Gram Panchayat Recruitment 2023

Spread the love

Gram Panchayat Recruitment 2023

Gram Panchayat Recruitment 2023 : ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 9 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gram Panchayat Recruitment 2023: ಉದ್ಯೋಗ ವಿವರ

ಇಲಾಖೆ ಹೆಸರು: ಬಾಗಲಕೋಟೆ ಜಿಲ್ಲಾ ಪಂಚಾಯತ್ (Bagalkot Zilla Panchayat)

ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ :23

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮೀತಿ : ದಿನಾಂಕ 19/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆಗೆ ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ರಶೀದಿಯನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳು – ರೂ. 500
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಪ.ಜಾತಿ/ ಪ.ಪಂ./ ಪ್ರ 1/ ಮಾ.ಸೈನಿಕ ಅಭ್ಯರ್ಥಿಗಳು – ರೂ. 200
• ವಿಶೇಷ ಚೇತನ ಅಭ್ಯರ್ಥಿಗಳು – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಿ, ಶುಲ್ಕ ಪಾವತಿಸಿದ ರಸೀದಿಯನ್ನು ಅಪ್ಲೋಡ್ ಮಾಡಬೇಕು.

Gram Panchayat Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:26.9.2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:19.10.2023

Gram Panchayat Recruitment 2023_Important Links

ವೆಬ್ ಸೈಟ್: https://bagalkot.nic.in/

ಅಧಿಸೂಚನೆ: https://cdn.s3waas.gov.in/s3a1d33d0dfec820b41b54430b50e96b5c/uploads/2023/09/2023092683.pdf

ಅರ್ಜಿ ಲಿಂಕ್: https://bagalkot.nic.in/library-supervisor-e/

Join Telegram Channel for Daily Updates


Spread the love

Leave a Comment