ವಿವಿಧ ಬ್ಯಾಂಕಗಳಲ್ಲಿ ನೇಮಕಾತಿ: IBPS SO Recruitment 2022

Spread the love

Join Our Telegram Channel

IBPS SO Recruitment 2022

IBPS SO Recruitment 2022: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್‌ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

IBPS SO Recruitment 2022_ಉದ್ಯೋಗ ವಿವರ

ಇಲಾಖೆ ಹೆಸರು: IBPS

ಅರ್ಜಿ ಸಲ್ಲಿಸುವ ಬಗೆ : online

ಹುದ್ದೆಯ ಹೆಸರು: ಐಟಿ ಆಫೀಸರ್ (ಸ್ಕೇಲ್ – 1), ಅಗ್ರಿಕಲ್ಚರಲ್ ಫೀಲ್ಡ್‌ ಆಫೀಸರ್ (ಸ್ಕೇಲ್-1), ರಾಜ್ಯಭಾಷಾ ಅಧಿಕಾರಿ (ಸ್ಕೇಲ್-1), ಕಾನೂನು ಅಧಿಕಾರಿ (ಸ್ಕೇಲ್-1), HR/ಪರ್ಸೊನೆಲ್ ಆಫೀಸರ್ (ಸ್ಕೇಲ್-1), ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1))

ಒಟ್ಟು ಹುದ್ದೆಗಳ ಸಂಖ್ಯೆ: 710

ಐಟಿ ಆಫೀಸರ್ (ಸ್ಕೇಲ್ – 1) – 44 ಹುದ್ದೆಗಳು
ಅಗ್ರಿಕಲ್ಚರಲ್ ಫೀಲ್ಡ್‌ ಆಫೀಸರ್ (ಸ್ಕೇಲ್-1) – 516 ಹುದ್ದೆಗಳು
ರಾಜ್ಯಭಾಷಾ ಅಧಿಕಾರಿ (ಸ್ಕೇಲ್-1) – 25 ಹುದ್ದೆಗಳು
ಕಾನೂನು ಅಧಿಕಾರಿ (ಸ್ಕೇಲ್-1) – 10 ಹುದ್ದೆಗಳು
HR/ಪರ್ಸೊನೆಲ್ ಆಫೀಸರ್ (ಸ್ಕೇಲ್-1) – 15 ಹುದ್ದೆಗಳು
ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1) – 100 ಹುದ್ದೆಗಳು



ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು

ಶೈಕ್ಷಣಿಕ ಅರ್ಹತೆ: ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.11.2022
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21.11.2022


ವಯೋಮಿತಿ ಅರ್ಹತೆಗಳು: 20 ರಿಂದ 30 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ,
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತುಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)


ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 175
ಉಳಿದ ಅಭ್ಯರ್ಥಿಗಳು – ರೂ. 850


ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ :ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

IBPS SO Recruitment 2022_Important Links

ವೆಬ್ ಸೈಟ್: https://www.ibps.in/

ಅಧಿಸೂಚನೆ: https://drive.google.com/file/d/1locHwUN6d3I2ENRfSEDIRljcMUfmrWAq/view?usp=drivesdk

ಅರ್ಜಿ ಲಿಂಕ್: https://ibpsonline.ibps.in/crpsoxioct22/basic_details.php


Spread the love

Leave a Comment