Indian Post Office Recruitment 2023
Indian Post Office Recruitment 2023: ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 48 ಹುದ್ದೆಗಳು ಖಾಲಿ ಇದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Indian Post Office Recruitment 2023_ ಉದ್ಯೋಗ ವಿವರ
ಇಲಾಖೆ ಹೆಸರು: India Post
ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್)
ಒಟ್ಟು ಹುದ್ದೆಗಳ ಸಂಖ್ಯೆ: 12828
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 48
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ವೇತನ:
ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್ (BPM) :12,000-29,380/-
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM) : 10,000-24,470/-
ಅರ್ಜಿ ಶುಲ್ಕ ವಿವರ: 100/-
SC/ST/Pwd ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ವಯೋಮಿತಿ ಅರ್ಹತೆಗಳು : 18 ರಿಂದ 40 ವರ್ಷ
ವಯೋಮಿತಿ ಸಡಿಲಿಕೆ:
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ಮಾಡುವ ವಿಧಾನ:
10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
Indian Post Office Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22.05.2023 16.06.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11.06.2023 23.06.2023
Indian Post Office Recruitment 2023_ Important Links
ವೆಬ್ ಸೈಟ್: https://indiapostgdsonline.gov.in/
ಅಧಿಸೂಚನೆ: https://indiapostgdsonline.cept.gov.in/Notifications/Model_Notification.pdf
Reschedule Online Application Dates : https://indiapostgdsonline.cept.gov.in/Notifications/Addendum.pdf
ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ: https://indiapostgdsonline.cept.gov.in/Notifications/Final_Post_Consolidation.pdf
ಅರ್ಜಿ ಲಿಂಕ್: https://indiapostgdsonline.gov.in/