Indian Post Office Recruitment 2023
Indian Post Office Recruitment 2023: ಭಾರತೀಯ ಅಂಚೆ ಇಲಾಖೆಯು ಇದೀಗ ಭರ್ಜರಿ ಉದ್ಯೋಗಾವಕಾಶದ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕದಲ್ಲಿ 1714 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Indian Post Office Recruitment 2023_ ಉದ್ಯೋಗ ವಿವರ
ಇಲಾಖೆ ಹೆಸರು: India Post
ಹುದ್ದೆಯ ಹೆಸರು: ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್.
ಒಟ್ಟು ಹುದ್ದೆಗಳ ಸಂಖ್ಯೆ: 30,041
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 1714
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ: 10th ಪಾಸ್
ಅಭ್ಯರ್ಥಿಗಳು ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
ಕರ್ನಾಟಕ ಅಭ್ಯರ್ಥಿಗಳಿಗೆ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಮೇಲಿನ ಅರ್ಹತೆಗಳ ಜತೆಗೆ ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
ವೇತನ:
ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್ (BPM) :12,000-29,380/-
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM) : 10,000-24,470/-
ಅರ್ಜಿ ಶುಲ್ಕ ವಿವರ: 100/-
ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ವಯೋಮಿತಿ ಅರ್ಹತೆಗಳು : 18 ರಿಂದ 40 ವರ್ಷ
ವಯೋಮಿತಿ ಸಡಿಲಿಕೆ:
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ಮಾಡುವ ವಿಧಾನ:
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
Indian Post Office Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03.08.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.08.2023
ಅಪ್ಲಿಕೇಶನ್ ತಿದ್ದುಪಡಿಗೆ ಅವಕಾಶ : 24-08-2023 ರಿಂದ 26-08-2023
Indian Post Office Recruitment 2023_ Important Links
ವೆಬ್ ಸೈಟ್: https://indiapostgdsonline.gov.in/#
Vacancy list: https://indiapostgdsonline.cept.gov.in/Notifications/Final_Post_Consolidation.pdf
ಅಧಿಸೂಚನೆ: https://indiapostgdsonline.cept.gov.in/Notifications/Model_Notification.pdf
ಅರ್ಜಿ ಲಿಂಕ್: https://indiapostgdsonline.gov.in/