Join Our Telegram Channel
Karnataka City Corporation Recruitment 2023
Karnataka City Corporation Recruitment 2023: ವಿವಿಧ ಜಿಲ್ಲೆಗಳಲ್ಲಿ ನಗರ ಸಭೆ, ಪುರಸಭೆ ಪಟ್ಟಣ ಪಂಚಾಯತಿ, ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Karnataka City Corporation Recruitment 2023:
ಉದ್ಯೋಗ ವಿವರ
ಇಲಾಖೆ ಹೆಸರು: City Corporation
ಹುದ್ದೆಯ ಹೆಸರು: ಪೌರಕಾರ್ಮಿಕರು (ಗ್ರೂಪ್ “ಡಿ”)
ಹುದ್ದೆಗಳ ಸಂಖ್ಯೆ: 751
ಚಿಕ್ಕಬಳ್ಳಾಪುರ – 102
ಹಾಸನ – 60
ಬಾಗಲಕೋಟೆ – 438
ವಿಜಯಪುರ – 151
ಅರ್ಜಿ ಸಲ್ಲಿಸುವ ಬಗೆ: Offline
ವಿದ್ಯಾರ್ಹತೆ: ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಿಲ್ಲ.
1.ಕನ್ನಡ ಮಾತನಾಡಲು ಗೊತ್ತಿರಬೇಕು.
2. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಪೌರಕಾರ್ಮಿಕರಾಗಿ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ, ಲೋಡರ್ಸ್, ಕ್ಲೀನರ್ಸ್ ಆಧಾರದಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದೇ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ವೇತನ : 17,000 – 28,950 /-
ವಯೋಮಿತಿ ಅರ್ಹತೆಗಳು: 18 ರಿಂದ 55 ವರ್ಷ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಅಭ್ಯರ್ಥಿಗಳು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
Karnataka City Corporation Recruitment 2023_ Important dates
ಚಿಕ್ಕಬಳ್ಳಾಪುರ:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11.02.2023
ಹಾಸನ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13.02.2023
ಬಾಗಲಕೋಟೆ:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13.02.2023
ವಿಜಯಪುರ:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14.02.2023
Karnataka City Corporation Recruitment 2023_ Important Links
Notification (Chikkballapur): https://drive.google.com/file/d/10WahhbI8RBkPxxMh0oIBDFGVSLZv89aR/view?usp=drivesdk
Notification (Hassan): https://drive.google.com/file/d/10aWXJE8vlyFuo0KXzmzlg3O_pXNLGdTt/view?usp=drivesdk
Notification (Bagalkot): https://drive.google.com/file/d/10e6CKL60K6tPRtozGxuGZVIZ_GWTbxnS/view?usp=drivesdk
Notification (Vijayapura): https://drive.google.com/file/d/10fJTP7LAxb8kMFgtJIBjX8aEOBgcpcvn/view?usp=drivesdk