Karnataka Forest Department Recruitment 2022
Karnataka Forest Department Recruitment 2022: ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ವಲಯ ಅರಣ್ಯಾಧಿಕಾರಿ (RFO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ (Karnataka Forest Department )
ಹುದ್ದೆಯ ಹೆಸರು: ವಲಯ ಅರಣ್ಯಾಧಿಕಾರಿ (RFO)
ಹುದ್ದೆಗಳ ಸಂಖ್ಯೆ: 10
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.11.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23.11.2022
ವೇತನ : 40,900-78,200 /-
ಶೈಕ್ಷಣಿಕ ಅರ್ಹತೆ: ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಬಿ.ಎಸ್ಸಿ (ವಿಜ್ಞಾನ)/ ನಿಗದಿತ ಇಂಜಿನಿಯರಿಂಗ್ ಪದವಿ.
ವಯೋಮಿತಿ ಅರ್ಹತೆಗಳು: ಕನಿಷ್ಠ 18
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 33 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ – 31 ವರ್ಷ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 28 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ,2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 200+20 (ಸೇವಾ ಶುಲ್ಕ)
ಎಸ್ಸಿ, ಎಸ್ಟಿ, ಪ್ರ 1 – 100+20(ಸೇವಾ ಶುಲ್ಕ)
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:10ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯಸಮರ್ಥತೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
Karnataka Forest Department Recruitment 2022_ Important Links
ವೆಬ್ ಸೈಟ್: https://kfdrecruitment.in/
ಅಧಿಸೂಚನೆ: https://forestrecruitment.files.wordpress.com/2022/10/rfo-hk-10-posts-notification-2022-23.pdf
ಅರ್ಜಿ ಲಿಂಕ್ : https://kfdrecruitment.in/
Syllabus: https://forestrecruitment.files.wordpress.com/2022/10/rfo-written-exam-syllabus.pdf