ಕರ್ನಾಟಕ ಅರಣ್ಯ ಇಲಾಖೆ ಬೃಹತ್ ನೇಮಕಾತಿ: Karnataka Forest Department Recruitment 2023

Spread the love

Karnataka Forest Department Recruitment 2023


Karnataka Forest Department Recruitment 2023: ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪೂರ್ಣ ಅಧಿಸೂಚನೆ ಪ್ರಕಟವಾದ ನಂತರ ಅಪ್ಡೇಟ್ ಮಾಡಲಾಗುವುದು.


Karnataka Forest Department KFD Recruitment 2023 : Details of Vacancies

ಹುದ್ದೆ : ಅರಣ್ಯ ವೀಕ್ಷಕ/ ಗಸ್ತು ಅರಣ್ಯ ಪಾಲಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ : 540

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ P.U.C ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ – ಗರಿಷ್ಠ 35 ವರ್ಷ
• ಪ್ರವರ್ಗ 2A, 2B, 3A, 3B – ಗರಿಷ್ಠ 38 ವರ್ಷ
• SC, ST, ಪ್ರವರ್ಗ 1 – ಗರಿಷ್ಠ 40 ವರ್ಷ

ಆಯ್ಕೆ ವಿಧಾನ :ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಇಲಾಖೆ ನಿಗದಿಪಡಿಸಿದ ಶುಲ್ಕ ಪಾವತಿಸಬೇಕು.

Karanataka Forest Department Recruitment 2023_Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :01.12. 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.12. 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 05.01.2024

Karanataka Forest Department Recruitment 2023_Important Links

ಅಫಿಸಿಯಲ್ ವೆಬ್ ಸೈಟ್: https://aranya.gov.in/aranyacms/(S(w00fyowbb4wsph3jhtntctkt))/English/Wing.aspx?u15HOwzBSyscoJ5AoBo2sQ==

ಅಧಿಸೂಚನೆ: https://recruitapp.in/fguard2023/uploads/files/notification/1yzfh9.pdf

ಅರ್ಜಿ ಲಿಂಕ್: https://kfdrecruitment.in/

Join Telegram Channel & WhatsApp group for Daily Updates


Spread the love

Leave a Comment