Karnataka GFGC Principal Grade-1 Recruitment 2022
Karnataka GFGC Principal Grade-1 Recruitment 2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Karnataka GFGC Principal Grade-1 Recruitment 2022
ಉದ್ಯೋಗ ವಿವರ
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಯ ಹೆಸರು: ಪ್ರಾಂಶುಪಾಲರು ಗ್ರೇಡ್-1 (UG)
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.01.2023
ಪೋಸ್ಟ್ ಆಫೀಸಿನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 17.01.2023
ಶೈಕ್ಷಣಿಕ ಅರ್ಹತೆ: ಪಿಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಮತ್ತು
ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ ಸಂಯೋಜನೆಗೊಂಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಬೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಭೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ/ ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)
ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 55 ವರ್ಷ ವಯಸ್ಸು ಮೀರಿರಬಾರದು.
ವೇತನ : 1,82,200 – 2,24,100/-
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 5000
SC/ST,ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳು – ರೂ. 2500
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು.
Karnataka GFGC Principal Grade-1 Recruitment 2022_Important Links:
ವೆಬ್ ಸೈಟ್: https://cetonline.karnataka.gov.in/kea/indexnew
ಅಧಿಸೂಚನೆ: http://164.100.133.71/keawebentry456/gfgcp22/Principal%20small%20Notificationkannada.pdf
ಅರ್ಜಿ ಲಿಂಕ್: https://cetonline.karnataka.gov.in/kea/gfgcp22