KPTCL Recruitment 2024 :
KPTCL Recruitment 2024 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPTCL Recruitment 2024: ಉದ್ಯೋಗ ವಿವರ
ಇಲಾಖೆ ಹೆಸರು: KPTCL
ಹುದ್ದೆಯ ಹೆಸರು: ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್
ಒಟ್ಟು ಹುದ್ದೆಗಳ ಸಂಖ್ಯೆ: 2975
ಕಿರಿಯ ಸ್ಟೇಷನ್ ಪರಿಚಾರಕ – 433 ಹುದ್ದೆಗಳು
ಕಿರಿಯ ಪವರ್‌ಮ್ಯಾನ್ – 2542 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ ಅರ್ಹತೆಗಳು: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಅಭ್ಯರ್ಥಿಗಳಿಗೆ 1ನೇ ವರ್ಷ ಮಾಸಿಕ ರೂ. 17,000, 2ನೇ ವರ್ಷ ಮಾಸಿಕ ರೂ. 19,000, 3ನೇ ವರ್ಷ ಮಾಸಿಕ ರೂ. 21,000 ರಂತೆ ಮೊದಲ ಮೂರು ವರ್ಷ ಸಂಭಾವನೆ ನೀಡಲಾಗುತ್ತದೆ. ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ಮಾಸಿಕ ರೂ. 28,550 ರಿಂದ ರೂ. 63,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ‘ಸಹನ ಶಕ್ತಿ ಪರೀಕ್ಷೆ’ಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳನ್ನು, ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೇಷ್ಠತೆ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.
ಸಹನ ಶಕ್ತಿ ಪರೀಕ್ಷೆ :
# ವಿದ್ಯುತ್ ಕಂಬ ಹತ್ತುವುದು – 8 ಮೀಟರ್ ಎತ್ತರ (ಕಡ್ಡಾಯ)
# 100 ಮೀಟರ್ ಓಟ – 14 ಸೆಕೆಂಡ್‌ಗಳು
# ಸ್ಕಿಪ್ಪಿಂಗ್ – ಒಂದು ನಿಮಿಷಕ್ಕೆ 50 ಬಾರಿ
# ಶಾಟ್‌ಫುಟ್ (12 ಪೌಂಡ್‌ಗಳು) – 8 ಮೀಟರ್ ಎಸೆತ (3 ಅವಕಾಶಗಳು)
# 800 ಮೀಟರ್ ಓಟ – 3 ನಿಮಿಷಗಳು
ಅರ್ಜಿ ಶುಲ್ಕ :
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 614/-
– ಪ್ರವರ್ಗ1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 614/-
– ಪ.ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಳಿಗೆ : 378/-
– ವಿಕಲಚೇತನ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಕೆಯ ವಿಧಾನ :ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.
KPTCL Recruitment 2024: 2024 Important Dates
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :21.10.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :20.11.2024.
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.11. 2024
KPTCL Recruitment 2024 : Important Links
Official website: https://kptcl.karnataka.gov.in/english
Short Notification: https://drive.google.com/file/d/1C2HC0IZeNGljcckuYwTdHwpGX4qhTcur/view?usp=drivesdk
Detail Notification: https://drive.google.com/file/d/1C54xmZPCKLDbXaAr-Y991EekGxn5SBx7/view?usp=drivesdk
Apply 👉: https://karnemaka.kar.nic.in/JPM_JSA_24/