SSLC ಪಾಸ್ ಆದವರಿಗೆ ಉದ್ಯೋಗ ಅವಕಾಶ: KSAT Recruitment 2022

Spread the love

KSAT Recruitment 2022: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿ ಇರುವ ಉಳಿದ ಮೂಲ ವೃಂದದ ಎರಡು ವಾಹನ ಚಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:
ಹುದ್ದೆಯ ಹೆಸರು: ವಾಹನ ಚಾಲಕ
ಹುದ್ದೆಗಳ ಸಂಖ್ಯೆ: 2 ( ಮಹಿಳೆ)
ಯಾವುದೇ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಿಲ್ಲದ ಪಕ್ಷದಲ್ಲಿ ಆಯಾ ಮೀಸಲಾತಿಯ ಅರ್ಹ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸುವ ಬಗೆ : offline
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.06.2022

ವೇತನ ವಿವರ: 21400-42000/-
ಶೈಕ್ಷಣಿಕ ಅರ್ಹತೆ: sslc
ಅರ್ಜಿ ಶುಲ್ಕ ವಿವರ:
ಸಾಮಾನ್ಯ ವರ್ಗ್, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ- 150/-
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ- ಇಲ್ಲ

ವಯೋಮಿತಿ ಅರ್ಹತೆಗಳು: 18 ರಿಂದ 35 ವರ್ಷ

ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009


Spread the love

Leave a Comment