NTPC Limited Recruitment 2024
NTPC Limited Recruitment 2024 : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
NTPC Limited Recruitment 2024 : ಉದ್ಯೋಗ ವಿವರ
ಇಲಾಖೆ ಹೆಸರು:NTPC
ಹುದ್ದೆಯ ಹೆಸರು: ಅಸಿಸ್ಟಂಟ್ ಎಕ್ಸಿಕ್ಯೂಟಿವ್ (ಆಪರೇಷನ್ಸ್)
ಒಟ್ಟು ಹುದ್ದೆಗಳ ಸಂಖ್ಯೆ:223
ವಿದ್ಯಾರ್ಹತೆ:ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.
ಅನುಭವ : NTPC Limited ಅಧಿಸೂಚನೆ ಪ್ರಕಾರ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ :ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• OBC ಅಭ್ಯರ್ಥಿಗಳಿಗೆ – 03 ವರ್ಷ
• SC/ ST ಅಭ್ಯರ್ಥಿಗಳಿಗೆ – 05 ವರ್ಷ
• PWD ಅಭ್ಯರ್ಥಿಗಳಿಗೆ – 10 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 55,000 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• SC, ST, PWD, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಸಾಮಾನ್ಯ, EWS, OBC ಅಭ್ಯರ್ಥಿಗಳು – ರೂ. 300
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
NTPC Limited Recruitment 2024 : Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 25.01.2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 08.02.2024
NTPC Limited Recruitment 2024: Important Links
ಅಫಿಸಿಯಲ್ ವೆಬ್ ಸೈಟ್: https://careers.ntpc.co.in/recruitment/index.php
ಅಧಿಸೂಚನೆ : https://careers.ntpc.co.in/recruitment/advertisements/04.24_eng_adv
ಅರ್ಜಿ ಲಿಂಕ್ : https://careers.ntpc.co.in/recruitment/login.php