PGCIL Recruitment 2025 : ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಫೀಲ್ಡ್ ಇಂಜಿನಿಯರ್ ಹಾಗೂ ಫೀಲ್ಡ್ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ
PGCIL Recruitment 2025 _ ಉದ್ಯೋಗ ವಿವರ :
ಹುದ್ದೆ : ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ : 1543
ಫೀಲ್ಡ್ ಇಂಜಿನಿಯರ್ (ಇಲೆಕ್ಟ್ರಿಕಲ್) – 532
ಫೀಲ್ಡ್ ಇಂಜಿನಿಯರ್ (ಸಿವಿಲ್) -198
ಫೀಲ್ಡ್ ಸೂಪರ್ವೈಸರ್ (ಇಲೆಕ್ಟ್ರಿಕಲ್) – 535
ಫೀಲ್ಡ್ ಸೂಪರ್ವೈಸರ್ (ಸಿವಿಲ್) – 193
ಫೀಲ್ಡ್ ಸೂಪರ್ವೈಸರ್ (ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್) – 85
ಶೈಕ್ಷಣಿಕ ಅರ್ಹತೆ :
* ಫೀಲ್ಡ್ ಇಂಜಿನಿಯರ್ (ಇಲೆಕ್ಟ್ರಿಕಲ್) – ಬಿ.ಎಸ್ಸಿ, ಬಿಇ/ ಬಿ.ಟೆಕ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.
* ಫೀಲ್ಡ್ ಇಂಜಿನಿಯರ್ (ಸಿವಿಲ್) – ಬಿ.ಎಸ್ಸಿ, ಬಿಇ/ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್.
* ಫೀಲ್ಡ್ ಸೂಪರ್ವೈಸರ್ (ಇಲೆಕ್ಟ್ರಿಕಲ್) – ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.
* ಫೀಲ್ಡ್ ಸೂಪರ್ವೈಸರ್ (ಸಿವಿಲ್) – ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್.
* ಫೀಲ್ಡ್ ಸೂಪರ್ವೈಸರ್ (ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್) – ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಐಟಿ.
ವಯೋಮಿತಿ :
ದಿನಾಂಕ 17 ಸೆಪ್ಟೆಂಬರ್ 2025ಕ್ಕೆ ಅಭ್ಯರ್ಥಿಗಳು ಗರಿಷ್ಠ 29 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC (NLC) ಅಭ್ಯರ್ಥಿಗಳಿಗೆ – 03 ವರ್ಷ
SC, STಅಭ್ಯರ್ಥಿಗಳಿಗೆ – 05 ವರ್ಷ
PWBD ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
* ಲಿಖಿತ ಪರೀಕ್ಷೆ (ಟೆಕ್ನಿಕಲ್ ನಾಲೆಜ್ ಟೆಸ್ಟ್, ಅಪ್ಟಿಟ್ಯೂಡ್ ಟೆಸ್ಟ್)
* ಸಂದರ್ಶನ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
* ಫೀಲ್ಡ್ ಇಂಜಿನಿಯರ್ ಹುದ್ದೆಗೆ – ರೂ. 400
* ಫೀಲ್ಡ್ ಸೂಪರ್ವೈಸರ್ ಹುದ್ದೆಗೆ – ರೂ. 300
* SC, ST, PWBD, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
PGCIL Recruitment 2025 _ Important Dates 2025 :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 27.08. 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 17.09.2025
PGCIL Recruitment 2025 _ Important link 2025 :
ಅಫಿಸಿಯಲ್ ವೆಬ್ ಸೈಟ್: https://www.powergrid.in/
ಅಧಿಸೂಚನೆ : https://www.powergrid.in/sites/default/files/job_opportunities_document/eng_of_FE_FTB.pdf
ಅರ್ಜಿ ಲಿಂಕ್ :https://careers.powergrid.in/recruitment-nextgen/h/login.aspx