ಎಸ್‌ಬಿಐ ನೇಮಕಾತಿ 2025 – SBI Probationary Officer Recruitment 2025

Spread the love

SBI Probationary Officer Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI Probationary Officer Recruitment 2025 : ಉದ್ಯೋಗ ವಿವರ _2025

ಇಲಾಖೆ ಹೆಸರು: SBI

ಹುದ್ದೆ : ಪ್ರೊಬೇಷನರಿ ಆಫೀಸರ್ (PO)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ : 541

ಅರ್ಜಿ ಸಲ್ಲಿಸುವ ಬಗೆ : online

ಪರೀಕ್ಷೆ ದಿನಾಂಕ : Prelims Exam: July / August 2025
Mains Examination: september 2025

ವೇತನ : 48,480 ರಿಂದ ರೂ 85,920

ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ ಸಂದರ್ಭದಲ್ಲಿ ಅವರು 30-09-2025 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)

ಅರ್ಜಿ ಶುಲ್ಕ ವಿವರ:
GN/OBC/EWS ಅಭ್ಯರ್ಥಿಗಳಿಗೆ – 750/-
SC/ST/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

ವಯೋಮಿತಿ ಅರ್ಹತೆಗಳು: 21 ರಿಂದ 30 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ: ಪರೀಕ್ಷೆ ಮೂಲಕ

ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಮುಖ್ಯ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು

SBI Probationary Officer Recruitment 2025_ Important data’s

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24.06.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14.07.2025

SBI Probationary Officer Recruitment 2025_ Important Links

ವೆಬ್ ಸೈಟ್ :

ಅಧಿಸೂಚನೆ :https://sbi.co.in/documents/77530/52947104/1_Detailed_Adv.2025_23.06.2025.pdf/54ca0942-3de1-afc4-45e8-f679fc552e7b?t=1750741324277

ಅರ್ಜಿ ಲಿಂಕ್:https://ibpsonline.ibps.in/sbipomay25/


Spread the love

Leave a Comment