Join Our Telegram Channel
SSC CHSL Recruitment 2022:
SSC CHSL Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
SSC CHSL Recruitment 2022
ಉದ್ಯೋಗ ವಿವರ
ಇಲಾಖೆ ಹೆಸರು: SSC
ಹುದ್ದೆಯ ಹೆಸರು: ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)
ಒಟ್ಟು ಹುದ್ದೆಗಳ ಸಂಖ್ಯೆ: 4500
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.01.2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 5.01.2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 6.01.2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಫೆಬ್ರವರಿ-ಮಾರ್ಚ್, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಮುಂದೆ ತಿಳಿಸಲಾಗುವುದು.
ವೇತನ :
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) : 19,900-63,200/-
ಡಾಟಾ ಎಂಟ್ರಿ ಆಪರೇಟರ್ (DEO) 25,500-81,100/-
ಶೈಕ್ಷಣಿಕ ಅರ್ಹತೆ: 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ ಅರ್ಹತೆಗಳು: 18 ರಿಂದ 27 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)
ಅರ್ಜಿ ಶುಲ್ಕ : 100/-
SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
SSC CHSL Recruitment 2022_Important Links
ವೆಬ್ ಸೈಟ್: https://ssc.nic.in/
ಅರ್ಜಿ ಲಿಂಕ್: https://ssc.nic.in/