SSC Sub Inspector Recruitment 2026 :
SSC Sub Inspector Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಸಬ್ ಇನ್ಸ್ಪೆಕ್ಟರ್ (ಜಿಡಿ), ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC Sub Inspector Recruitment 2026 ಉದ್ಯೋಗ ವಿವರ
ಇಲಾಖೆ ಹೆಸರು: SSC
ಹುದ್ದೆಯ ಹೆಸರು: ಸಬ್ ಇನ್ಸ್ಪೆಕ್ಟರ್ (ಜಿಡಿ), ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್) ಸಬ್ ಇನ್ಸ್ಪೆಕ್ಟರ್ (ಫೈರ್) (ಪುರುಷ, ಮಹಿಳಾ)
ಹುದ್ದೆಗಳ ಸಂಖ್ಯೆ: 1871
ಅರ್ಜಿ ಸಲ್ಲಿಸುವ ಬಗೆ : online
ವಯೋಮಿತಿ ಅರ್ಹತೆಗಳು: 20 ರಿಂದ 25 ವರ್ಷ
ವಯೋಮಿತಿ ಸಡಿಲಿಕೆ : SC, ST ಅಭ್ಯರ್ಥಿಗಳಿಗೆ – 05 ವರ್ಷ
• OBC ಅಭ್ಯರ್ಥಿಗಳಿಗೆ – 03 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ದೈಹಿಕ ಸಹಿಷ್ಣುತೆ ಪರೀಕ್ಷೆ (PET), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ ವಿವರ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: 100/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
SSC Sub Inspector Recruitment 2026_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.09.2026
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.09.2026
ಅರ್ಜಿ ಶುಲ್ಕ ಸಲ್ಲಿಸಲು ಕೊನೆ ದಿನಾಂಕ : 01.10.2026
SSC Sub Inspector Recruitment 2026_ Important Links
ಆಫೀಸಿಯಲ್ ವೆಬ್ ಸೈಟ್: https://ssc.gov.in/
ಅದಿಸೂಚನೆ :https://ssc.gov.in/api/attachment/uploads/masterData/NoticeBoards/Notice_of_adv_capf_2026.pdf
ಅರ್ಜಿ ಲಿಂಕ್ :https://ssc.gov.in/login